ವಿದ್ಯಾರ್ಥಿಗಳು ಕೇವಲ ಪಾಠ ಪ್ರವಚನಗಳಿಗೆ ಮೀಸಲಾಗಿ ಅಂಕಗಳಿಕೆಗೆ ಮಾತ್ರ ಹೆಚ್ಚಿನ ಪ್ರಾಮುಖ್ಯತೆ ನೀಡದೆ ಕ್ರೀಡೆ ಮತ್ತು ದೈಹಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಅಭಿರುಚಿ ಬೆಳೆಸಿಕೊಂಡಲ್ಲಿ ವಿದ್ಯಾರ್ಥಿ ಜೀವನದ ಪರಿಪೂರ್ಣತೆ ಅನುಭವಿಸಲು ಸಾಧ್ಯ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಶಿಕಾರಿಪುರ ಪಟ್ಟಣದ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಹಾಗೂ ಸ್ಥಳೀಯ ಬಾಪೂಜಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ವತಿಯಿಂದ ಹಮ್ಮಿಕೊಳ್ಳಲಾದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ 2025-26 ಚಾಲನೆ ನೀಡಿ ಗುರುವಾರ ಮಧ್ಯಾಹ್ನ 2 ಗಂಟೆಗೆ ಮಾತನಾಡಿದ ಅವರು ಪ್ರಧಾನ ಮಂತ್ರಿಗಳು ಸ್ವಾತಂತ್ರ್ಯದ ಸವಿ ನೆನಪಿನ ಕ್ವಿಟ್ ಇಂಡಿಯಾ ಚಳುವಳಿಗೆ ಆದ್ಯತೆ ನೀಡಿದ್ದಾರೆ ಎಂದರು.