ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಧಾರವಾಡ ನಗರದಾದ್ಯಂತ ಹರ್ ಗರ್ ತಿರಂಗಾ ರ್ಯಾಲಿಯನ್ನು ನಡೆಸಲಾಯಿತು. ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಹರ್ ಗರ್ ತಿರಂಗಾ ರ್ಯಾಲಿ ಕಾರ್ಯಕ್ರಮಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಅವರು ಬುಧವಾರ ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಿದರು.