ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಸಮಾವೇಶ ಮಾಡಲು ನಿರ್ಧರಿಸಿರುವುದು ರಾಜಕೀಯ ಪ್ರೇರಿತ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣವನ್ನು ಎಸ್.ಐ.ಟಿ ಗೆ ನೀಡಿದಾಗ ಸ್ವಾಗತ ಮಾಡಿದ ಬಿಜೆಪಿ ಈಗ ಎನ್.ಐ.ಎ ಗೆ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಎಸ್.ಐ.ಟಿ ತನಿಖೆ ಪೂರ್ಣ ಆಗಿಲ್ಲ ಆದ್ರೂ ತನಿಖೆ ಸರಿಯಾಗಿ ಆಗಿಲ್ಲ ಎಂದು ಬಿಜೆಪಿ ಹೇಳುತ್ತಾರೆ.