ಮನೆ ಮುಂದೆ ಆಟ ಆಡುತ್ತಿದ್ದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ಮಾಡಿ ಕಚ್ಚಿ ಗಾಯಗೊಳಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ತಿಮ್ಮರಾಜಿಪುರದಲ್ಲಿ ಶುಕ್ರವಾರ ನಡೆದಿದೆ. ಕೊಳ್ಳೇಗಾಲ ತಾಲೂಕಿನ ತಿಮ್ಮರಾಜಿಪುರ ಗ್ರಾಮದ ಶಶಿ ಮತ್ತು ಸುಧಾ ದಂಪತಿ ಪುತ್ರ ನಿಶಾಂತ್(6) ನಾಯಿ ದಾಳಿಗೆ ಒಳಗಾದ ಬಾಲಕ. ಶಾಲೆಗೆ ರಜೆ ಇದ್ದ ಕಾರಣ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ನಾಯಿಗಳು ಬಾಲಕನನ್ನು ಕಚ್ಚಿ ಎಳೆದಾಡುತ್ತಿದ್ದನ್ನು ಕಂಡ ಪಾಲಕರು ಮಗನನ್ನು ಬಚಾವ್ ಮಾಡಿದ್ದಾರೆ. ಅಷ್ಟರಲ್ಲಾಗಲೇ ಬಾಲಕನ ಎದೆ ಮತ್ತು ಮುಖಕ್ಕೆ ನಾಯಿಗಳು ಕಚ್ಚಿ ತೀವ್ರವಾಗಿ ಗಾಯಗೊಳಿಸಿದ್ದವು. ಬಾಲಕನನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿಲಾಗಿದೆ.