ರಾಯಚೂರು ನಗರದ ರೈಲು ನಿಲ್ದಾಣದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಸೇಂದಿ ಸಾಗಿಸುತ್ತಿದ್ದ ವ್ಯಕ್ತಿ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಕೃಷ್ಣ ರೈಲು ನಿಲ್ದಾಣದ ಮೂಲಕ ರೈಲಿನಲ್ಲಿ ತಂದಿದ್ದ ಹರಿಜನವಾಡ ಬಡಾವಣೆಯ ನಾಗಪ್ಪ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು 40 ಲೀಟರ್ ಸೇಂದಿ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಗೆ ಆರಂಭಿಸಿದ್ದಾರೆ.