ಸಕಲೇಶಪುರ: ತಾಲ್ಲೂಕಿನ ಕಾಕನಕೋಟೆಯ ಪ್ರಭುನಗರ ಗ್ರಾಮದಲ್ಲಿ ಗಣೇಶ ಉತ್ಸವ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಖತ್ ಸ್ಟೆಪ್ಸ್ ಹಾಕುವ ಮೂಲಕ ಶಾಸಕ ಸಿಮೆಂಟ್ ಮಂಜು ಮಕ್ಕಳನ್ನು ಮನರಂಜಿಸಿದ್ದಾರೆ. ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು ಹಲವು ಮನರಂಜನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ ಶಾಸಕ ಸಿಮೆಂಟ್ ಮಂಜು ಮಕ್ಕಳೊಂದಿಗೆ ಕುಣಿದು ಕುಪ್ಪಳಿಸುವ ಮೂಲಕ ನೆರೆದಿದ್ದವರ ಗಮನ ಸೆಳೆದರು.