ಗ್ರಾ.ಪಂ ನೌಕರರು ಸಂಘಟಿತರಾಗಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಗ್ರಾ.ಪಂ ನೌಕರರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಶ್ರೀನಿವಾಸಪುರ ತಾಲ್ಲೂಕಿನಲ್ಲಿ 5ನೇ ಸಮ್ಮೇಳನವನ್ನು ಶನಿವಾರ 5:30 ರಲ್ಲಿ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸಲಾಗಿತ್ತು ಸಮ್ಮೇಳನದ ಕಾರ್ಯಕ್ರಮವನ್ನು ಜಿಲ್ಲಾ ಗೌರವಾಧ್ಯಕ್ಷರಾದ ಗಾಂಧಿನಗರ ನಾರಾಯಣಸ್ವಾಮಿ ಉದ್ಘಾಟಿಸಿದರು. ಉದ್ಘಾಟನೆ ನಂತರ ಕಾರ್ಯಕ್ರಮ ಕುರಿತು ನಾರಾಯಣಸ್ವಾಮಿ ರವರು ಮಾತನಾಡಿ ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ 36 ಸಾವಿರ ನೀಡಬೇಕು, ಗ್ರಾಚುಟಿ ನೀಡಬೇಕು, ನಿವೃತ್ತಿ ವೇತನ ಹಾಗೂ