ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ ಕರಿದುಗ್ಗನಹಳ್ಳಿ ಹಾಗೂ ಹನುಮಂತಯ್ಯನಪಾಳ್ಯ ಗ್ರಾಮದೇವತೆ ಶ್ರೀದೊಡ್ಡಮ್ಮದೇವಿ ದೇವಾಲಯದಲ್ಲಿ ಆ.29ರಿಂದ 31ರವರೆಗೆ ಸ್ಥಿರಬಿಂಬ ಪ್ರತಿಷ್ಠಾಪನಾ ಕುಂಭಾಭಿಷೇಕ ಹಾಗೂ ಚಂಡಿಕಾ ಹೋಮ ಸೇರಿದಂತೆ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಸಂಬಂಧ ಗುರುವಾರ ಸಂಜೆ 5 ಗಂಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಲೆರಾಂಪುರ ಶ್ರೀಮಠದ ಡಾ.ಹನುಮಂತನಾಥ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಈ ಧಾರ್ಮಿಕ ಕಾರ್ಯಕ್ರಮಕ್ಕೆ 2000ಕ್ಕೂ ಹೆಚ್ಚು ಭಕ್ತರ ಆಗಮನ ನಿರೀಕ್ಷೆಯಿದೆ ಎಂದು ಹೇಳಿದರು. ಆ.31ರಂದು ಕೇಂದ್ರ ಸಚಿವ ವಿ.ಸೋಮಣ್ಣ ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸೇರಿದಂತೆ ಸಿದ್ದಗಂಗಾ ಶ್ರೀಗಳು ಹಾಗೂ ಹಲವು ಶ್ರೀಮಠದ ಶ್ರೀಗ