ನಗರದಲ್ಲಿ ಶನಿವಾರ ನಡೆದ ಶ್ರೀನುಲಿಯ ಚಂದಯ ಜಯಂತಿಯ ಭವ್ಯ ಮೆರವಣಿಗೆಯಲ್ಲಿ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ ಭಾಗವಹಿಸಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಮಾತನಾಡಿ ಈಗಿನ ಯುವ ಪೀಳಿಗೆಯು ಮಹಾನ್ ನಾಯಕರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಮುನ್ನಡೆಯಬೇಕು ಎಂದರು.ಈ ಸಂದರ್ಭದಲ್ಲಿ ಕರ್ನಾಟಕ ಪ.ಜಾ. ಹಾಗೂ ಪ.ಪಂ. ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ರವರು, ಅಖಿಲ ಕರ್ನಾಟಕ ಕಳೆವ ಮಹಾಸಂಘದ ರಾಜ್ಯಾಧ್ಯಕ್ಷ ಶಿವಾನಂದ ಭಜಂತ್ರಿ ಇದ್ದರು.