ಆಗಸ್ಟ್ 15 ಮತ್ತು 16ರಂದು ಶಿವಮೊಗ್ಗ ನಗರದ ಗುಡ್ಡೆಕಲ್ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಕಮಿಟಿಯ ಅಧ್ಯಕ್ಷ ರವಿಕುಮಾರ್ ತಿಳಿಸಿದರು. ಶಿವಮೊಗ್ಗ ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಗಸ್ಟ್ 15ರಂದು ಬರಣಿ ಕೃತಿಗೆ ನಡೆಯಲಿದೆ ಆಗಸ್ಟ್ 16ರಂದು ಆಡಿಕೃತ್ತಿಕೆ ಜಾತ್ರೆ ನಡೆಯಲಿದೆ.ಈ ಜಾತ್ರಾ ಮಹೋತ್ಸವಕ್ಕೆ ಶಿವಮೊಗ್ಗ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳಿಂದಲೂ ಭಕ್ತರು ಹರಕೆ ತೀರಿಸಲು ಬರುತ್ತಾರೆ.ಈ ಹಿನ್ನೆಲೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.