ಯಲ್ಲಾಪುರ : ತಾಲೂಕಿನ ಕಿರವತ್ತಿಯ ಡೊಮಗೇರಿಯಲ್ಲಿ ಅಂಗನವಾಡಿ ಮುಗಿಸಿ ಮನೆಗೆ ತೆರಳುತ್ತಿದ್ದ ಮಕ್ಕಳ ಮೇಲೆ ಬೃಹತ್ ಅತ್ತಿ ಮರವೊಂದು ಉರುಳಿ ಬಿದ್ದ ಪರಿಣಾಮ ಗರ್ಭಿಣಿ ಮಹಿಳೆಯರ್ವಳು ದಾರುಣ ಸಾವು ಕಂಡಿದ್ದು, ಗಾಯಗೊಂಡಿದ್ದ ಸ್ವಾತಿ ಬಾಬು ಖರಾತ್ (17) ಆಸ್ಪತ್ರೆ ಗೆ ಸಾಗಿಸುವ ಮಾರ್ಗ ಮಧ್ಯೆ ಮೃತ ಪಟ್ಟಿದ್ದಾಳೆ.ಶಾಸಕ ಶಿವರಾಮ ಹೆಬ್ಬಾರ್ ಅವರು ಸುದ್ದಿ ತಿಳಿದ ತಕ್ಷಣವೇ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ದುಃಖಿತರಾದ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು ಹಾಗೂ ಸರ್ಕಾರದಿಂದ ಅಗತ್ಯ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು.