ರಾಜ್ಯ ಸರಕಾರ ರೈತರನ್ನು ಕಡೆಗಣಿಸುತ್ತಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಆರೋಪಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದ ರೈತರ ಬೆಳೆಗಳು ಹಾನಿಯಾಗಿದ್ದು, ರೈತರಿಗೆ ಪರಿಹಾರ ಬಿಡುಗಡೆ ಮಾಡಿಲ್ಲ, ಸಚಿವರು ಹಾಗೂ ಶಾಸಕರು ಪ್ರವಾಸ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ಆರೋಪಿಸಿದರು.