ಹಾಸನ:ಸಂಸತ್ ಅಧಿವೇಶನದಲ್ಲಿ ಹಾಸನ ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಸಂಭಂದಿಸಿದ ಇಲಾಖೆಯ ಕೇಂದ್ರ ಸಚಿವರುಗಳ ಗಳನಸೆಳೆಯುವ ಕೆಲಸ ಮಾಡಿದ್ದೇನೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದರು. ಹಾಸನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಹಾಸನ ಜಿಲ್ಲೆಯ ಪ್ರಮುಖ ಸಮಸ್ಯೆಗಳ ಪೈಕಿ ಶೀಘ್ರವಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಸುವ ಬಗ್ಗೆ ಸಂಭಂದಿಸಿದ ಇಲಾಖೆ ಸಚಿವರ ಜೊತೆ ಚರ್ಚಿಸ ಲಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಪ್ರಮುಖವಾಗಿ ಕಾಡುತ್ತಿರುವ ಬಿಳಿ ಸುಳಿ ರೋಗಕ್ಕೆ ಸೂಕ್ತ ಪರಿಹಾರ ಹಾಗೂ ತೆಂಗು ಬೆಳೆಗೆ ಅಂಟಿರುವ ಹೊಸ ಮಾದರಿಯ ಕಾಯಿಲೆ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರದ ತಜ್ಞರ ತಂಡ ಕಳಿಸಿ ಸೂಕ್ತ ಪರಿಹಾರ ಒದಗಿಸುವ ಸಲುವಾಗಿಯುೂ ಕೃಷಿ ಇಲಾಖೆಯ ಸಚಿವರ ಜೊತೆ ಮಾತುಕತೆ ನಡೆಸಲಾಗಿದೆ ಎಂದರೂ.