ರಾಯಚೂರ ಜಿಲ್ಲೆಯ ಮಾನ್ವಿ ತಾಲೂಕಿನ ಮುಸ್ಟೂರ ಗ್ರಾಮದಲ್ಲಿ ಕಳೆದ ಅನೇಕ ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಎಲ್ಲೆಡೆಯೂ ಮಳೆ ನೀರು ನಿಲ್ಲುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಜನರಲ್ಲಿ ಮಲೇರಿಯಾ ಡೆಂಗ್ಯೂ ನಂತಹ ರೋಗದ ಭೀತಿ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಪರಿಸರ ಸ್ವಚ್ಛಗೊಳಿಸುವ ಜೊತೆಗೆ ಮಳೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುವ ಸ್ಥಳಗಳಲ್ಲಿ ಕ್ರಿಮಿನಾಶಕವನ್ನು ಸಿಂಪಡಿಸುವ ಮೂಲಕ ಗ್ರಾಮದಲ್ಲಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಮಲ್ಲಿಕಾರ್ಜುನ ಸೇವಾ ಸಮಿತಿಯ ಅನೇಕರು ಕ್ರಿಮಿನಾಶಕವನ್ನು ಸಿಂಪಡಿಸುವ ಮೂಲಕ ಮಾದರಿಯಾಗಿದ್ದಾರೆ.