ಸುರತ್ಕಲ್ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಲಕ್ಕಿ ಸ್ಕೀಂ ಹೆಸರಲ್ಲಿ ಸಾವಿರಾರು ಗ್ರಾಹಕರಿಗೆ 15 ಕೋ.ರೂ. ಅಧಿಕ ವಂಚನೆ ಮಾಡಿದ ಆರೋಪದಲ್ಲಿ ಸುರತ್ಕಲ್ ಮತ್ತು ಬಜ್ಪೆಯ ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ನ್ಯೂ ಶೈನ್ ಎಂಟರ್ ಪ್ರೈಸಸ್ ಎಂಬ ಲಕ್ಕಿ ಸ್ಕೀಮ್ ಮಾಡಿ ವಂಚಿಸಿದ್ದ ಕಾಟಿಪಳ್ಳ ಒಂದನೇ ಬ್ಲಾಕ್‌ನ ಮಹಾಕಾಳಿ ದೈವಸ್ಥಾನ ಬಳಿಯ ನಿವಾಸಿ ಅಹ್ಮದ್ ಖುರೇಶಿ (34), ಕಾಟಿಪಳ್ಳ ಎರಡನೇ ಬ್ಲಾಕ್‌ನ ಕೋರ್ದಬ್ಬು ದ್ವಾರದ ಬಳಿಯ ನಿವಾಸಿ ನಝೀರ್ ಯಾನೆ ನಾಸಿರ್ (39) ಹಾಗೂ ನ್ಯೂ ಇಂಡಿಯಾ ರಾಯಲ್ ಸ್ಕೀಮ್ ಗ್ರೀನ್ ಲೈಟ್ ಲಕ್ಕಿ ಸ್ಕೀಮ್‌ನಲ್ಲಿ ವಂಚನೆ ಮಾಡಿದ್ದ ಬಜ್ಪೆ ನಿವಾಸಿ ಮುಹಮ್ಮದ್ ಅಶ್ರಫ್ (43), ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮುಹಮ್ಮದ್ ಹನೀಫ್ (50) ಬಂಧಿತರು.