ಕಲಬುರಗಿ : ಕಲಬುರಗಿ ತಾಲೂಕಿನ ಸೀತನೂರು ಗ್ರಾಮದಲ್ಲಿ ಹಳೆ ವೈಷಮ್ಯದ ಹಿನ್ನಲೆಯಲ್ಲಿ ವ್ಯಕ್ತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆಯಾದ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಆ31 ರಂದು ಬೆಳಗ್ಗೆ 11.30 ಕ್ಕೆ ಸೀತನೂರು ಗ್ರಾಮಕ್ಕೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಡಾ ಶರಣಪ್ಪ, ಹತ್ಯೆಯಾದ ಶಿವರಾಯ್ ಮಾಲೀಪಾಟೀಲ್ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.. ಯಾವ ಕಾರಣಕ್ಕಾಗಿ ಶಿವರಾಯ್ ಮಾಲೀಪಾಟೀಲ್‌ನ ಹತ್ಯೆಯಾಗಿದೆ ಅನ್ನೊದರ ಬಗ್ಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರಿಂದ ಪೊಲೀಸ್ ಆಯುಕ್ತ ಡಾ ಶರಣಪ್ಪ ಮಾಹಿತಿ ಸಂಗ್ರಹಿಸಿದ್ದಾರೆ.