ಬೀಳಗಿ ತಾಲೂಕಿನ ಮನ್ನಿಕೇರಿ, ಹೊನ್ನಿಹಾಳ ಗ್ರಾಮಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಶನಿವಾರ ಭೇಟಿ ನೀಡಿ, ಜಲಜೀವನ್ ಮಿಷನ್ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಬೀಳಗಿ ತಾಲ್ಲೂಕಿನ ಮನ್ನಿಕೇರಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಶುದ್ಧ ಕುಡಿಯುವ ನೀರಿನ ಸಂಸ್ಕರಣಾ ಘಟಕದ ಕಾಮಗಾರಿಯನ್ನು ಪರಿಶೀಲಿಸಿದರು. ಘಟಕ ನಿರ್ಮಾಣದ ವಿನ್ಯಾಸ, ಬಳಸುತ್ತಿರುವ ಸಾಮಗ್ರಿಗಳ ಗುಣಮಟ್ಟ ಮತ್ತು ಕಾಮಗಾರಿಯ ವೇಗದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ, ಗ್ರಾಮಸ್ಥರ ಬಳಕೆಗೆ ಲಭ್ಯವಾಗುವಂತೆ ಕ್ರಮಕೈಗೊಳ್ಳುವಂತೆ ಗುತ್ತಿಗೆದಾರರು ಮತ್ತು ಇಂಜಿನಿಯರ್‍ಗಳಿಗ