ಯಾದಗಿರಿ ಜಿಲ್ಲೆಯ ವಡಿಗೇರ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿನ ಕಾಮಗಾರಿ ಅನುಷ್ಠಾನದಲ್ಲಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿ ಯಾದಗಿರಿಯ ಜಿಲ್ಲಾ ಪಂಚಾಯತಿ ಕಾರ್ಯಾಲಯದ ಮುಖ್ಯ ಲೆಕ್ಕಾಧಿಕಾರಿ ವೆಂಕಟೇಶ ಚಟ್ನಳ್ಳಿ ಅವರು ಕಾಮಗಾರಿಗೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಇಂಜಿನಿಯರ್,ಸಹಾಯಕ ಕಾರ್ಯಪಾಲಕ ಅಭಿಯಂತರ, ಕಾರ್ಯಪಾಲಕ ಅಭಿಯಂತರರು,ಗುತ್ತಿಗೆದಾರರು ಮತ್ತು ಸರಕು ಸಾಗಣೆ ದಾರರ ವಿರುದ್ಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.