ರಾಸಾಯನಿಕ ಸಾಮಗ್ರಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ, ಸಾಮಾಗ್ರಿಗಳು ಸ್ಪೋಟ ವಾಹನಕ್ಕೆ ಬೆಂಕಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ರಾಜ್ಯ ಹೆದ್ದಾರಿಯಲ್ಲಿ ರಾಸಾಯನಿಕ ಸಾಮಗ್ರಿ ಹೊತ್ತೊಯ್ಯುತ್ತಿದ್ದ ಕ್ಯಾಂಟರ್ ಒಂದು ಪಲ್ಟಿಯಾಗಿರುವ ಘಟನೆ ಸೋಮವಾರ ಬೆಳಗಿನ ಜಾವ 5 ಗಂಟೆಗೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕಕ್ಕೆ ಉಳಿರುವ ಕ್ಯಾಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ವಾಹನದಲ್ಲಿದ್ದ ರಾಸಾಯನಿಕ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ರಾಸಾಯನಿಕ ಸಾಮಗ್ರಿಗಳನ್ನು ಸಾರ್ವಜನಿಕರು ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಲು ಮುಗಿ ಬಿದ್ದಿದ್ದಾರೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ