ಧ್ವನಿ ಇಲ್ಲದವರಿಗೆ ಧನಿ ಆದವರು ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರು ಧ್ವನಿ ಇಲ್ಲದವರಿಗೆ ಧನಿಯಾದವರು ಅಂದರೆ ಜಮೀನ್ದಾರರ ಬಳಿ ಕೂಲಿ ಕೆಲಸ ಮಾಡಿಕೊಂಡಿದ್ದ ಜನರಿಗೆ ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಅನೇಕ ಬಡ ಜನತೆಗೆ ಅಪಾರ ಕೊಡುಗೆ ನೀಡಿ ಧಣಿಗಳಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ತಿಳಿಸಿದರು. ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ,ಜಿಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಹಾಗೂ ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿ