ಚಿಕ್ಕಬಳ್ಳಾಪುರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಶಿಡ್ಲಘಟ್ಟ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಆಶ್ರಯದಲ್ಲಿ ೨೦೨೫-೨೬ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಶಿಡ್ಲಘಟ್ಟ ನಗರದ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ನಡೆಯಿತು. ಶಿಡ್ಲಘಟ್ಟ ನಗರದ ನೆಹರೂ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾ ಕೂಟ ನಡೆಯಿತು. ರಾಷ್ಟಿçÃಯ ಅಥ್ಲೆಟಿಕ್ ಕ್ರೀಡಾಪಟು ಜಯಂತಿಗ್ರಾಮ ನಾರಾಯಣಸ್ವಾಮಿ ದಸರಾ ಕ್ರೀಡಾ ಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ರಾಜ್ಯ ಸರಕಾರವು ಇದೆ ಮೊದಲ ಬಾರಿಗೆ ಆನ್ ಲೈನ್ ಮೂಲಕ ನೋಂದಣಿ ಮಾಡುವ ಪ್ರಕ್ರಿಯೆಯನ್ನು ಜಾರಿಗೆ ತಂದಿದೆ ಎಂದರು.