ಖಗ್ರಾಸ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಶಕ್ತಿ ಪೀಠಗಳಲ್ಲಿ ರಾತ್ರಿ 9 ಗಂಟೆಗೆ ಮಹಾ ಮಂಗಳಾರತಿ ನಡೆಸಲಾಯಿತು. ಶೃಂಗೇರಿ ಆ ಶಾರದಾಂಬೆಯ ದೇಗುಲದಲ್ಲಿ ಹಾಗೂ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಗ್ರಹಣದ ಹಿನ್ನೆಲೆಯಲ್ಲಿ ರಾತ್ರಿಯ ಪ್ರಸಾದವನ್ನು ಸ್ಥಗಿತಗೊಳಿಸಲಾಗಿತ್ತು. ನಿರಂತರವಾಗಿ ಕಳಸೇಶ್ವರನಿಗೆ ಜಲಾಭಿಷೇಕ ಮಾಡುವ ಮೂಲಕ ಭಕ್ತರು ಕಣ್ತುಂಬಿ ಕೊಂಡರು