ಚಿತ್ತಾಕುಲಾ ಗ್ರಾಪಂ ಕಚೇರಿ ಬಳಿ ಇರುವ ಡಂಪಿಂಗ್ ಯಾರ್ಡ್ ನ ದುರ್ವಾಸನೆಯಿಂದ ಪಕ್ಕದಲ್ಲೇ ಇರುವ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಶುಕ್ರವಾರ ಸಂಜೆ 4ರ ವೇಳೆ ಸಂಭವಿಸಿದೆ. ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪಕ್ಕದಲ್ಲಿಯೇ ಪಂಚಾಯತ್ನವರು ಡಂಪಿಂಗ್ ಯಾರ್ಡ್ ನಿರ್ಮಿಸಿದ್ದು, ಇದರಿಂದಾಗಿ ದುರ್ವಾಸನೆ ಹೆಚ್ಚಾಗಿದೆ. ಈ ಶಾಲೆಯಲ್ಲಿ 5ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಸುಮಾರು 330 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ಡಂಪಿಂಗ್ ಯಾರ್ಡ್ ಸರಿಯಾದ ನಿರ್ವಹಣೆ ಇಲ್ಲದೆ ಇದ್ದರಿಂದ ಈಗ ಸುತ್ತಮುತ್ತಲಿನ ಜನತೆ ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.