ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್ ಅವರನ್ನು ಆಹ್ವಾನಿಸಿರುವ ಸರ್ಕಾರ ಕೂಡಲೇ ನಿರ್ಧಾರ ಕೈಬಿಟ್ಟು, ಬಹುಸಂಖ್ಯಾತರ ಭಾವನೆಗಳನ್ನು ಕೆರಳಿಸಿರುವ ಮುಖ್ಯಮಂತ್ರಿಗಳು ರಾಜ್ಯದ ಜನರ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಯುವ ಬ್ರಿಗೇಡ್ ಕಾರ್ಯಕರ್ತರು ಗುರುವಾರ ಸಂಜೆ 5 ಗಂಟೆಗೆ ದಾವಣಗೆರೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.