ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಿಸಬೇಕು : ಕೊತ್ತೂರು ಮಂಜುನಾಥ್ ಕೋಲಾರ: ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಆಸ್ಪತ್ರೆಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡುವಂತೆ ಮಾಡಿ ಸಾರ್ವಜನಿಕರಿಗೆ ಸೂಕ್ತ ಆರೋಗ್ಯ ಸೌಲಭ್ಯ ಒದಗಿಸುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು ನಗರದ ಹೊರವಲಯದಲ್ಲಿರುವ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಛೇರಿಯಲ್ಲಿ ಶನಿವಾರ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಅಗತ್ಯವಾದ ಕುಂದುಕೊ