ಶಾರದಳ್ಳಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಮೂರ್ತಿ ಅನಾವರಣ ನೂತನ ಭವನಕ್ಕೆ ಗುದ್ದಲಿ ಪೂಜೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಶಾರದಳ್ಳಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಮೂರ್ತಿ ಉದ್ಘಾಟನೆ ಹಾಗೂ ನೂತನ ವಾಲ್ಮೀಕಿ ಭವನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹಾಗೂ ಮಹರ್ಷಿ ವಾಲ್ಮೀಕಿ ಗೊಲಪಲ್ಲಿ ಆಶ್ರಮದ ಪೂಜ್ಯ ವರದಾನೇಶ್ವರ ಮಹಾಸ್ವಾಮಿಗಳಿಂದ ಕಾರ್ಯಕ್ರಮ ನೆರವೇರಿಸಲಾಯಿತು ನಂತರ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿ ಮಹರ್ಷಿ ವಾಲ್ಮೀಕಿ ಅವರ ಆದರ್ಶ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕೆಂದರು ಮತ್ತು ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಭವನ ಬೇಗನೆ ನಿರ್ಮಾಣ ಮಾಡುವುದಾಗಿ ಸಚಿವರು ತಿಳಿಸಿದರು.