ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 'ಜಾಗತಿಕ ಸಾಂಸ್ಕೃತಿಕ ಉತ್ಸವ'ದಲ್ಲಿ ಶನಿವಾರ (ಆಗಸ್ಟ್ 30) ಪ್ಯಾಲಸ್ತೀನ್ ನಲ್ಲಿ ಸಂಕಷ್ಟಕ್ಕೊಳಗಾಗಿರುವ ಕುಟುಂಬಗಳು, ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸುತ್ತಿರುವ ಸಮರ್ ಝಘಾ (Samar Zagha) ಅವರಿಗೆ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು 'ಒಂದು ಜಗತ್ತು ಒಂದು ಕುಟುಂಬ ಮಾನವೀಯ ಪುರಸ್ಕಾರ' ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಸದ್ಗುರು ಶ್ರೀ ಮಧುಸೂದನ ಸಾಯಿ, ನಮ್ಮ ಜೀವನದಲ್ಲಿ ಬರುವ ಕಷ್ಟಗಳೇ ನಾವು ದೇವರ ಕಡೆಗೆ ತಿರುಗಲು ಮತ್ತು ನಮ್ಮ ಜೀವನಕ್ಕೆ ಹೆಚ್ಚಿನ ಅರ್ಥವನ್ನು ಕಂಡುಕೊಳ್ಳಲು ಕಾರಣವಾಗುತ್ತವೆ ಎಂದು ಹೇಳಿದರು.