ಹುಬ್ಬಳ್ಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಮಹಾಮಂಡಳದ ವತಿಯಿಂದ ದುರ್ಗದ ಬೈಲ್ ವೃತ್ತದಲ್ಲಿ ಜರುಗಿದ ಗಣಪತಿ ವಿಗ್ರಹಗಳ ಸಾಮೂಹಿಕ ವಿಸರ್ಜನೆ ಸಮಾರಂಭದ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಭಾಗಿಯಾಗಿದ್ದರು. ಹುಬ್ಬಳ್ಳಿಯ ಮೂರುಸಾವಿರ ಮಠ ಮಹಾಸಂಸ್ಥಾನದ ಪರಮಪೂಜ್ಯರಾದ ಶ್ರೀಮನ್ಮಹಾರಾಜ ನಿರಂಜನ ಜಗದ್ಗುರು ಡಾ. ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ಮೋಹನ್ ಲಿಂಬಿಕಾಯಿ, ಉದ್ಯಮಿಗಳು ಹಾಗೂ ಸಮಾಜ ಸೇವಕರಾದ ಜಿತೇಂದ್ರ ಮಜೇಥಿಯಾ ಸೇರಿದಂತೆ ಉಪಸ್ಥಿತರಿದ್ದರು.