ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಿಂಧನೂರು ಪಟ್ಟಣ ಸೇರಿದಂತೆ ಎಲ್ಲ ಖಾಸಗಿ ಆಸ್ಪತ್ರೆಗಳ ಮುಂದೆ ವೈರಲ್ ಫೀವರ್ ನಿಂದ ಬಳಲುತ್ತಿರುವ ಮಕ್ಕಳನ್ನು ಎತ್ತಿಕೊಂಡು ಬಂದು ಸರತಿ ಸಾಲಿನಲ್ಲಿ ನಿಂತಿರುವ ಪೋಷಕರ ದಂಡೆ ಕಂಡುಬರುತ್ತಿದೆ. ಮಂಗಳವಾರ ಮಧ್ಯಾನ ಎಂತಹ ದೃಶ್ಯ ಸಿಂಧನೂರು ಪಟ್ಟಣದ ಖಾಸಗಿ ಆಸ್ಪತ್ರೆ ಮುಂಭಾಗದಲ್ಲಿ ಕಂಡುಬಂದಿದ್ದು ಚಿಕ್ಕ ಚಿಕ್ಕ ಮಕ್ಕಳನ್ನು ಎತ್ತಿಕೊಂಡಿರುವ ಮಹಿಳೆಯರು ಸರತಿ ಸಾಲಿನಲ್ಲಿ ನಿಂತಿರುವುದು ಮನ ಕಲಕುವ ದೃಶ್ಯ ಕಂಡು ಬಂದಿದೆ. ಮಕ್ಕಳು ಅವಮಾನ ವೈಪರಿತ್ಯದಿಂದ ಅನಾರೋಗ್ಯಕ್ಕೆ ತುತ್ತಾಗಿ ಜ್ವರ ಕೆಮ್ಮು ನೆಗಡಿಯಿಂದ ಬಳಲುತ್ತಿದ್ದಾರೆ.