ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಂಗಳವಾರದಿಂದ ಇತಿಹಾಸದ ಪುಟಗಳಲ್ಲಿ ಸೇರ್ಪಡೆಗೊಂಡು, ಹೊಸ ರೂಪದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯಾರಂಭಗೊಂಡಿದೆ. ರಾಜ್ಯ ಸರ್ಕಾರ ಪ್ರಕಟಿಸಿರುವ ಅಧಿಸೂಚನೆಯಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ನಗರ ಪಾಲಿಕೆಗಳು ಕಾರ್ಯನಿರ್ವಹಿಸಲಿದ್ದು, ಈ ಐದು ನಗರ ಪಾಲಿಕೆಗಳಿಗೆ ಆಯುಕ್ತರನ್ನು ಸಹ ನೇಮಕ ಮಾಡಲಾಗಿದೆ. ಈ ನಡುವೆ ಮಂಗಳವಾರ ರಾತ್ರಿ 7 ಗಂಟೆ ಸುಮಾರಿಗೆ ಬಿಬಿಎಂಪಿ ಕೇಂದ್ರ ಕಚೇರಿ ಮೇಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೋರ್ಡ್ ತೆರೆವುಗೊಳಿಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಾಮಫಲಕ ಅಡವಡಿಸಲಾಯಿತು.