ಬಿಜೆಪಿಯವರಿಗೆ ಧರ್ಮಸ್ಥಳದ ಬಗ್ಗೆ ಕಿಂಚಿತ್ ಗೌರವ ಇಲ್ಲ ಎಂದು ಶಿವಮೊಗ್ಗ ನಗರದಲ್ಲಿ ಮಾಜಿ ಸಚಿವ ಆಯನೂರು ಮಂಜುನಾಥ್ ಹೇಳಿದ್ದಾರೆ. ಶನಿವಾರ ಶಿವಮೊಗ್ಗ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್ಐಟಿ ರಚನೆಯ ಬಗ್ಗೆ ವೀರೇಂದ್ರ ಹೆಗ್ಗಡೆ ಅವರೇ ಎಸ್ಐಟಿಯನ್ನು ಸ್ವಾಗತಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಯಾವಾಗ ಇದೊಂದು ಷಡ್ಯಂತ್ರ ಎಂದು ಹೇಳಿದರು ಆಗ ಬಿಜೆಪಿ-ಜೆಡಿಎಸ್ ಶಾಸಕರು ಮಾತನಾಡಲಾರಂಭಿಸಿದರು. ಇವರ ಅಧಿಕಾರದಲ್ಲಿ ಧರ್ಮಸ್ಥಳದ ಬಗ್ಗೆ ಯಾವುದೇ ರೀತಿಯಲ್ಲಿ ಮಾತನಾಡಲಿಲ್ಲ ಬಿಜೆಪಿ ಅವರಿಗೆ ಧರ್ಮಸ್ಥಳದ ಬಗ್ಗೆ ಕಿಂಚಿತ್ ಗೌರವ ಇಲ್ಲ ಎಂದರು.