ಸುರಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಗ್ರಂಥಾಲಯಕ್ಕೆ ಜಾಗ ನೀಡುವಂತೆ ಪ್ರತಿಭಟನೆ ಸುರಪುರ ನಗರದ ಅಂಬೇಡ್ಕರ್ ವೃತ್ತದ ಬಳಿ ಗ್ರಂಥಾಲಯ ನಿರ್ಮಾಣಕ್ಕೆ ಖಾರಿಜ್ ಖಾತಾ 2, ಎಕರೆ 26 ಗುಂಟೆ ಜಾಗ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಭೀಮವಾದ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಲಾಯಿತು ನಮ್ಮ ಬೇಡಿಕೆ ಈಡೇರದೆ ಇರುವುದರಿಂದ ಅಂಬೇಡ್ಕರ್ ವೃತ್ತದಲ್ಲಿ ನಿರಂತರ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದು ದಲಿತ ಮುಖಂಡರು ಪ್ರತಿಭಟನೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಭೀಮವಾದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಹಾಗೂ ತಾಲೂಕಾ ಪದಾಧಿಕಾರಿಗಳು ಭಾಗವಹಿಸಿದ್ದರು.