ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ನಡೆಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಇಂದಿನಿಂದ ಆಗಸ್ಟ್ 31ರವರೆಗೆ ಬಂಡೀಪುರದಿಂದ ಬೀದರ್ ವರೆಗೆ ಹಮ್ಮಿಕೊಂಡಿರುವ ಮೂರು ದಿನಗಳ ಬೈಕ್ ಜಾಥಾಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಫಾರಿ ಕೇಂದ್ರದ ಬಳಿ ಚಾಲನೆ ದೊರೆಯಿತು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕರಾದ ಎಸ್. ಪ್ರಭಾಕರನ್ ಅವರು ಹಸಿರು ನಿಶಾನೆ ತೋರುವ ಮೂಲಕ ಬೈಕ್ ಜಾಥಾಗೆ ಚಾಲನೆ ನೀಡಿದರು.