ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲೆ ಮಡಿಕೇರಿಯ ಅರಣ್ಯ ಭವನದಲ್ಲಿ ಹುತಾತ್ಮರ ದಿನಾಚರಣೆ ನಡೆಯಿತು. ಗಣ್ಯ ಅಥಿತಿಗಳು ಹುತಾತ್ಮರ ಸ್ಮಾರಕಕ್ಕೆ ಹೂ ಗುಚ್ಚ ಇಟ್ಟು ಪುಷ್ಪನಮನ ಸಲ್ಲಿಸಿ ಹುತಾತ್ಮರನ್ನ ಸ್ಮರಿಸಲಾಯಿತು.ಬಳಿಕ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಅಭಿಷೇಕ್ ಮಾತನಾಡಿ ಅರಣ್ಯ ಇಲಾಖೆಯ 61 ಹುತಾತ್ಮರ ತ್ಯಾಗ ಬಲಿದಾನವನ್ನ ಸ್ಮರಿಸಿದರು. ಕೊನೆಯಲ್ಲಿ ಪೊಲೀಸ್ ವಾದ್ಯ ವೃಂದವು ಅಬೈಡ್ ವಿತ್ ಮಿ ಹಾಗೂ ಲಾಸ್ಟ್ ಪೋಸ್ಟ್ ಗಾಯನದ ಮೂಲಕ ಗೌರವ ಸಮರ್ಪಿಸಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಎಚ್.ಜಗನ್ನಾಥ, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣ