ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಷಡ್ಯಂತ್ರ ನಡೆಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನಗರದಲ್ಲಿ ಸೋಮವಾರ ಮಧ್ಯಾಹ್ನ 12ಕ್ಕೆ ಬೀದರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲ ವತಿಯಿಂದ ಬೃಹತ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ್ ಕೇಂದ್ರ ಮಾಜಿ ಸಚಿವ ಭಗವಂತ ಕೃಪ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಕಲ್ಬುರ್ಗಿ ವಿಭಾಗ ಪ್ರಮುಖ ಈಶ್ವರಸಿಂಗ್ ಠಾಕೂರ್ ಪಾಲ್ಗೊಂಡಿದ್ದರು.