ರಕ್ತದಾನ ಶಿಬಿರ ನಡೆಸುವ ಮೂಲಕ ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ಸದಸ್ಯರು ವಾರ್ಷಿಕೋತ್ಸವ ವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ.ಟ್ರಸ್ಟ್ನ ಮೊದಲನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಶುಕ್ರವಾರ ಅಂಬೇಡ್ಕರ್ ಭವನದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 100 ಸಾಧಕರಿಗೆ ಸನ್ಮಾನ ಸಮಾರಂಭವನ್ನು ಕೂಡ ಏರ್ಪಡಿಸಲಾಗಿತ್ತು,ಸಮಾಜಕ್ಕೆ ಏನಾದರೂ ಮಾಡಬೇಕು ಎಂಬ ಸಂಕಲ್ಪದೂಂದಿಗೆ ಉದ್ಭವವಾದ ಈ ಟ್ರಸ್ಟ್ಗೆ ಇಂದು ವರ್ಷದ ಸಂಭ್ರಮ.