ಬಿಎಂಟಿಸಿ ಬಸ್ ಅಪಘಾತಕ್ಕೀಡಾದ ಘಟನೆ ಆಗಸ್ಟ್ 27ರಂದು ಸಂಜೆ 4 ಗಂಟೆ ಸುಮಾರಿಗೆ ಮಾಗಡಿ ರಸ್ತೆಯ ಟೋಲ್ ಗೇಟ್ ಅಂಡರ್ ಪಾಸ್‌ನಲ್ಲಿ ಸಂಭವಿಸಿದೆ.ವಿಜಯನಗರ ಮಾರ್ಗದ ರಸ್ತೆಯಲ್ಲಿ ಘಟನೆ ಸಂಭವಿಸಿದ್ದು, ವೇಗವಾಗಿ ಬಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬಸ್ ರಸ್ತೆಗೆ ಅಡ್ಡಲಾಗಿ ತಿರುಗಿ ನಿಂತಿದ್ದು, ವಿಂಡ್ ಶೀಲ್ಡ್ ಕಳಚಿ ಬಿದ್ದಿದೆ.ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಮಾಗಡಿ ರೋಡ್ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.