ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ರೈತ ಓರ್ವರು ಸಾಲ ಬಾಧೆ ಹಾಗೂ ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಉಡಿಗಾಲ ಗ್ರಾಮದ ರೈತ ಬಸವರಾಜು (52) ವಯಸ್ಸು ಮೃತಪಟ್ಟ ವ್ಯಕ್ತಿಯಾಗಿದ್ದು. ತಮ್ಮ ಎರಡೂವರೆ ಎಕರೆ ಜಮೀನಿನಲ್ಲಿ ಬೆಳೆ ಹಾಕಿದ್ದು ಕೈಕೊಟ್ಟಿದ್ದರಿಂದ ನಷ್ಟವಾಗಿದೆ ಇದರಿಂದ ಸಾಕಷ್ಟು ಕೈಸಾಲ ಮಾಡಿಕೊಂಡಿದ್ದರು ಇದರಿಂದ ಮನನೊಂದು ರೈತ ಬಸವರಾಜು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ