ಪದವಿ ವಿದ್ಯಾರ್ಥಿಗಳ ಗೊಂದಲ ಬಗೆಹರಿಸುವಂತೆ ಒತ್ತಾಯಿಸಿ ಎಐಡಿಎಸ್‌ಓ ಪ್ರತಿಭಟನೆ ನಡೆಸಿದರು. ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ. ಮಂಗಳವಾರ, ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸುವಂತೆ ಆಗ್ರಹಿಸಿ ಎಐಡಿಎಸ್‌ಓ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು