ಮಡಿಕೇರಿ: ವೈಯಕ್ತಿಕ ವಿಚಾರಗಳಿಗೆ ಆಸ್ಪದ ನೀಡದೆ ಕಾನೂನಿನ ಚೌಕಟ್ಟಿನಡಿಯಲ್ಲಿ ಶಾಂತಿಯುತ ದಸರಾ ಆಚರಿಸುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಕರೆ ನೀಡಿದರು. ಸೋಮವಾರ ಮಡಿಕೇರಿಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಮಡಿಕೇರಿ ನಗರ ದಸರಾ ದಶಮಂಟಪ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮಡಿಕೇರಿ ದಸರಾ ಮೈಸೂರು ದಸರಾ ಕ್ಕಿಂತ ವಿಜೃಂಭಣೆಯಿಂದ ನಡೆಯುತ್ತಿದ್ದು ವೈಯಕ್ತಿಕವಾಗಿ ಹಾಗೂ ಸರ್ಕಾರದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು. ಸಭೆಯಲ್ಲಿ ದಶಮಂಟಪ ಸಮಿತಿಯ ಪದಾಧಿಕಾರಿಗಳು ಹಾಗೂ ದಸರಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ದೇವಾಲಯ ಸಮಿತಿಯ ಪ್ರಮುಖರನ್ನು, ಶಕ್ತಿ ದೇವಾಲಯಗಳ ಅರ್ಚಕರುಗಳನ್ನು ಸನ್ಮಾನಿಸಲಾಯಿತು.