ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಪಟ್ಟಣ, ಭೀಮಳ್ಳಿ, ಮೇಳಕುಂದಾ ಸೇರಿ ಹಲವು ಗ್ರಾಮಗಳಿಗೆ ಭೇಟಿ ನೀಡಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಯನ್ನು ಪರಿಶೀಲಿಸಿದರು. ಒಂದುವಾರ ಸುರಿದ ನಿರಂತರ ಮಳೆಯಿಂದಾಗಿ ಹೆಸರು, ಉದ್ದು, ತೊಗರಿ ಸೇರಿದಂತೆ ಮುಂಗಾರು ಬೆಳೆಗಳು ನಾಶವಾದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನಲೆಯಲ್ಲಿ ತಹಶೀಲ್ದಾರರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿದ ಶಾಸಕರು ಹಾನಿಗೀಡಾದ ಕೃಷಿಭೂಮಿಗಳನ್ನು ಪರಿಶೀಲಿಸಿದರು. ಬೆಳೆ ಹಾನಿಗೆ ಸರ್ಕಾರದಿಂದ ಸೂಕ್ತ ಪರಿಹಾರ ದೊರಕುವಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಶಾಸಕರು, ರೈತರಿಗೆ ಧೈರ್ಯ ತುಂಬಿದರು. ಶೆನಿವಾರ ಸಂಜೆ 5 ಗಂಟೆಗೆವರೆಗೆ ಶಾಸಕರು ಹಲವು ಗ್ರಾಮಗಳ ಪ್ರದಕ್ಷಿಣೆ ನಡೆ