ನೈಋತ್ಯ ರೈಲ್ವೆ ವಿಭಾಗದ ಕೇಂದ್ರ ಕಚೇರಿ ಹುಬ್ಬಳ್ಳಿಯಲ್ಲಿ ವ್ಯಾಪ್ತಿಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಇಂದು ನಡೆಯಿತು.. ಸೆಪ್ಟೆಂಬರ್ 10 ರಂದು ಮಧ್ಯಾಹ್ನ 2-00 ಗಂಟೆಗೆ ನೈರುತ್ಯ ರೈಲ್ವೆ ಇಲಾಖೆಯ ಜನರಲ್ ಮ್ಯಾನೇಜರ್ ಶ ಮುಕುಲ್ ಸರನ್ ಮಥುರ್ ಮತ್ತು ಇನ್ನಿತರೆ ಅಧಿಕಾರಿಗಳ ಜೊತೆ ಕೊಪ್ಪಳದ ಸಂಸದ ರಾಜಶೇಖರ ಹಿಟ್ನಾಳ ಸಭೆ ನಡೆಸಿದರು. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತುರ್ತಾಗಿ ಮುಕ್ತಾಯಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ಕ್ಷೇತ್ರದಲ್ಲಿ ಕೈಗೊಳ್ಳಬೇಕಿರುವ ಹೊಸ ಯೋಜನೆಗಳ ಬಗ್ಗೆ ತುರ್ತಾಗಿ ಸರ್ವೆ ಕಾರ್ಯ ಕೈಗೊಂಡು ಅನುಮೋದನೆಗಾಗಿ ಕೇಂದ್ರ ರೈಲ್ವೆ ಮಂಡಳಿಗೆ ಕಳುಹಿಸಲು