ಮಹಾರಾಷ್ಟ್ರದಿಂದ ಭೀಮ ನದಿಗೆ 3ಲಕ್ಷ ಕ್ಯೋಸೆಕ್ ನೀರು ಹರಿಬಿಟ್ಟ ಹಿನ್ನೆಲೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಡ್ಲೆವಾಡ ಹಾಗೂ ಶಂಭೇವಾಡ ಗ್ರಾಮದ ಸೇತುವೆಯು ಸಂಪೂರ್ಣವಾಗಿ ಜಲಾವೃತಗೊಂಡಿದ್ದು ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಗ್ರಾಮಸ್ಥರನ್ನು ಟ್ರ್ಯಾಕ್ಟರ್ ಮೂಲಕ ಸ್ಥಳಾಂತರ ಮಾಡಲಾಗಿದೆ. ಗ್ರಾಮಸ್ಥರನ್ನು ಗ್ರಾಮದ ಕಾಳಜಿ ಕೇಂದ್ರಕ್ಕೆ ಬುಧವಾರ ಸಾಯಂಕಾಲ 5ಗಂಟೆ ಸುಮಾರಿಗೆ ಸ್ಥಳಾಂತರ ಮಾಡಲಾಯಿತು. ಗ್ರಾಮದ ಸಂಪರ್ಕ ಸೇತುವೆಯು ಸಂಪೂರ್ಣವಾಗಿ ಮುಳುಗಡೆಯಾದ ಹಿನ್ನಲೆ ಗ್ರಾಮಸ್ಥರು ನಡುಗಡ್ಡಿಯಲ್ಲಿ ಸಿಲುಕಿಕೊಂಡ ಪರಿಣಾಮ ಟ್ರ್ಯಾಕ್ಟರ್ ಮೂಲಕ ಅಧಿಕಾರಿಗಳು ಸ್ಥಳಾಂತರ ಮಾಡಿದರು.