ಮಂಗಳೂರು ನಗರದ ಹೊರ ವಲಯದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತನಿಗೆ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 15 ವರ್ಷದ ಬಾಲಕಿ ಮೇಲೆ ಆರೋಪಿ ಅತ್ಯಾಚಾರ ನಡೆಸಿದ ಪ್ರಕರಣ ಮಂಗಳೂರಿನ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂದೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.