ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಜೂನ್ 11 ರಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಸಜಿಪಮುನ್ನೂರು ನಿವಾಸಿ ಉಮರ್ ಫಾರೂಕ್ ಎಂಬಾತ ನೀಡಿದ ದೂರು ಸುಳ್ಳು ಪ್ರಕರಣವೆಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಜಿಪಮುನ್ನೂರು ಗ್ರಾಮದ ನಿವಾಸಿ ಉಮರ್ ಪಾರೂಕ್ (48) ಜೂನ್ 11 ರಂದು ಮುಂಜಾನೆ ಜೀಪಿನಲ್ಲಿ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಇಬ್ಬರು ಅಪರಿಚಿತರು ತನ್ನ ಮೇಲೆ ತಲವಾರು ಬೀಸಿ ತನ್ನನ್ನು ಕೊಲೆ ಮಾಡಲು ಯತ್ನಿಸಿರುತ್ತಾರೆ ಎಂಬುದಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.