ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಮಾಜಿ ಶಾಸಕ ಅಮೃತ ದೇಸಾಯಿ ಆಗ್ರಹಿಸಿದರು. ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿರಂತರ ಮಳೆಯಿಂದ ರೈತರು ಬೆಳೆದ ಮುಂಗಾರು ಹಂಗಾಮಿನ ಬೆಳೆಗಳು ಮಳೆಯಿಂದ ಹಾನಿಯಾಗಿದೆ. ಈ ಕುರಿತು ಸರಕಾರ ಗಂಭೀರವಾಗಿ ಪರಿಗಣಿಸಿ ರೈತರ ಕಷ್ಟಕ್ಕೆ ಸ್ಪಂದಿಸಿ ಸೂಕ್ತ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.