ದಾಂಡೇಲಿ : ನಗರದಲ್ಲಿರುವ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ವನ್ಯಜೀವಿ ವಿಭಾಗದ ಕಚೇರಿಯ ಆವರಣದಲ್ಲಿ ಅರಣ್ಯ ಸಂಪತ್ತು ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಅರಣ್ಯ ಹುತಾತ್ಮರ ಸರ್ವೋಚ್ಚ ತ್ಯಾಗ, ಬಲಿದಾನಗಳ ಸ್ಮರಣೆಗಾಗಿ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಗುರುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಚರಿಸಲಾಯಿತು. ಅರಣ್ಯ ಹುತಾತ್ಮರಿಗೆ ಇಲಾಖೆಯ ಎಲ್ಲ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಗಳು ಸಕಲ ಗೌರವಗಳೊಂದಿಗೆ ಪುಷನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ತೇಜಸ್ವಿನಿ ಸೊಗಲದ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.