ಬ್ರಹ್ಮಾವರದಲ್ಲಿ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಕಾವಾಡಿ ಗ್ರಾಮದ ಪ್ರಕಾಶ್ ಶೆಟ್ಟಿ ಎಂಬವರು ಕೆಲಸದ ನಿಮಿತ್ತ ಹೊರ ಜಿಲ್ಲೆಗಳಿಗೆ ತೆರಳುತ್ತಿದ್ದು ಐದಾರು ತಿಂಗಳಿಗೊಮ್ಮೆ ಮನೆಗೆ ಬರುತ್ತಿದ್ದರು. ಕಳೆದ ವರ್ಷ ಜೂನ್ ತಿಂಗಳಲ್ಲಿ ಕೊನೆಯ ಬಾಡಿಗೆ ಮನೆಗೆ ಬಂದಿದ್ದು ತದನಂತರ ಸುಮಾರು ಏಳು ತಿಂಗಳದಿಂದ ಯಾವುದೇ ರೀತಿಯ ಸಂಪರ್ಕ ಸಿಗದೇ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.