ಕಲಬುರಗಿ : 2025 ಮತ್ತು 26 ನೇ ಸಾಲಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಸರ್ಕಾರ ಕೂಡಲೇ ಅನ್ನದಾತರ ನೆರವಿಗೆ ಧಾವಿಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ್ ಆಗ್ರಹಿಸಿದ್ದಾರೆ.. ಆ29 ರಂದು ಮಧ್ಯಾನ 1 ಗಂಟೆಗೆ ಕಲಬುರಗಿಯಲ್ಲಿ ಮಾತನಾಡಿದ ಅವರು ಕಳೆದ ಬಾರಿ ಮತ್ತು ಈ ಬಾರಿಯೂ ಸಾಕಷ್ಟು ರೈತರು ಬೆಳೆ ವಿಮೆ ಮಾಡಿಸಿದ್ರು ಸಹ ರೈತರಿಗೆ ಪರಿಹಾರ ಸಿಕ್ಕಿಲ್ಲ.. ಕೂಡಲೇ ರಾಜ್ಯ ಸರ್ಕಾರ ಬೆಳೆ ನಷ್ಟ ಪರಿಹಾರ ಬಿಡುಗಡೆ ಮಾಡಬೇಕೆಂದು ಬಾಲರಾಜ್ ಗುತ್ತೇದಾರ್ ಆಗ್ರಹಿಸಿದ್ದಾರೆ..