ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳಿಗೆ ಚಾಲನೆ ಬಾಗೇಪಲ್ಲಿ:-ಪ್ರತಿಯೊಬ್ಬರ ಜೀವನದಲ್ಲಿ ಕ್ರೀಡೆಗಳು ಮಹತ್ವ ಪಡೆದುಕೊಳ್ಳುತ್ತವೆ. ಓದು-ಬರಹದ ಜತೆ ಕ್ರೀಡೆಗಳಲ್ಲಿ ಭಾಗವಹಿಸುವವರ ಜೀವನ ಕ್ರಿಯಾಶೀಲ ಹಾಗೂ ಪರಿಪೂರ್ಣ ಆಗಿರುತ್ತದೆ' ಎಂದು ಬಿಇಓ ವೆಂಕಟೇಶಪ್ಪ ಹೇಳಿದರು.ತಾಲ್ಲೂಕು ಆಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಪಟ್ಟಣದ ತಾಲ್ಲೂಕು ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಗುಂಡು ಎಸೆದು ಚಾಲನೆ ನೀಡಿ ಅವರು ಮಾತನಾಡಿದರು.